ಅಧಿಕಮಾಸದಲ್ಲಿ ವಿಷ್ಣು ಸಹಸ್ರನಾಮ ಜಪದ ಫಲ ಸರ್ವಶ್ರೇಷ್ಠವಾದ ಶ್ರೀ ಮಹಾವಿಷ್ಣುವಿನ ಸಹಸ್ರನಾಮ ಪಠಿಸಿದರೆ ಜೀವನದಲ್ಲಿ ಈ ಸಮಸ್ಯೆಗಳಿಂದ ಮುಕ್ತಿ ಸಿಗುತ್ತದೆ. ಸರ್ವಶ್ರೇಷ್ಠವಾದ ಶ್ರೀ ವಿಷ್ಣು ಸಹಸ್ರನಾಮ :-
1). ವಿಷ್ಣು ಸ್ವತಃ ತನ್ನ ಹೆಸರಿನ ಅತೀಂದ್ರಿಯ ಧ್ವನಿಯಲ್ಲಿ ಸಂಪೂರ್ಣವಾಗಿ ಅಸ್ತಿತ್ವದಲ್ಲಿರುತ್ತಾನೆ. ಹಾಗಾಗಿ ವಿಷ್ಣುಸಹಸ್ರನಾಮವನ್ನು ಹೆಚ್ಚು ಹೆಚ್ಚು ಕಾಲ ಪಠಣಮಾಡಿದರೆ ಉತ್ತಮ. 2). ವಿಷ್ಣು ಸಹಸ್ರನಾಮದಲ್ಲಿ ಎಲ್ಲ ವೈದಿಕ ಮಂತ್ರಗಳನ್ನು ಸೇರಿಸಲಾಗುತ್ತದೆ. ಆದ್ದರಿಂದ ಈ ಮಂತ್ರವನ್ನು ಪಠಿಸುವ ಮೂಲಕ ಹೇಳುವವರಿಗೆ ಅಷ್ಟೇ ಅಲ್ಲ ಕೇಳುವವರು ಕೂಡ ಪ್ರಯೋಜನ ಪಡೆಯುತ್ತೀರಿ
3). ವಿಷ್ಣುಸಹಸ್ರನಾಮ ಪಾರಾಯಣಕ್ಕೆ ಯಾವುದೇ ಜಾತಿ ಮತಗಳ ಭೇದವೇನೂ ಇರುವದಿಲ್ಲ. ಹಾಗೆ ಪಠಣಕ್ಕಾಗಿ ಯಾವುದೇ ಕಠಿಣ ಮತ್ತು ವೇಗದ ನಿಯಮಗಳಿಲ್ಲ. ಯಾವುದೇ ಸಂದರ್ಭಗಳಲ್ಲಿ, ಯಾವುದೇ ಸಮಯದಲ್ಲಿ ನೀವು ಎಲ್ಲಿಯಾದರೂ ಪಠಿಸಬಹುದು. 4). ವಿಷ್ಣು ಸಹಸ್ರನಾಮವನ್ನು ಪಠಿಸುವುದರಿಂದ ನಿಮ್ಮ ಹಿಂದಿನ ಜನ್ಮದ ಪಾಪ ಕರ್ಮದ ಪ್ರತಿಕ್ರಿಯೆಗಳಿಂದ ನಿಮ್ಮನ್ನು ಮುಕ್ತಗೊಳಿಸುತ್ತದೆ.
5). ವಿಷ್ಣು ಸಹಸ್ರನಾಮ ಪಠಿಸುವ ಭಕ್ತರಿಗೆ ಎಂದೂ ಭಯವಿಲ್ಲ. ಇದರಿಂದ ವಿಶೇಷ ಕಾಂತಿ, ವರ್ಚಸ್ಸು, ಆತ್ಮವಿಶ್ವಾಸ, ಮನೋಬಲ, ದೇಹಬಲ ಇಂದ್ರಿಯಬಲಗಳು ಹೆಚ್ಚಾಗಿ ಉತ್ತಮ ಆರೋಗ್ಯವನ್ನು ಕರುಣಿಸುತ್ತದೆ. 6). ವಿಷ್ಣುಸಹಸ್ರನಾಮವನ್ನು ಪ್ರತಿನಿತ್ಯ ಪಾರಾಯಣ ಮಾಡಿದರೆ ಜೀವನದಲ್ಲಿ ಬರುವ ಸಂಕಷ್ಟಗಳು ಪರಿಹಾರವಾಗುತ್ತವೆ.
7). ಶುದ್ಧಮನದಿಂದ ವಿಷ್ಣು ಸಹಸ್ರನಾಮವನ್ನು ಪಠಿಸಿದರೆ ಆಧ್ಯಾತ್ಮಿಕ, ಆಧಿದೈವಿಕ ಹಾಗೂ ಆಧಿಭೌತಿಕ ಪೀಡೆಗಳಿಗೆ ಪರಿಹಾರ ದೊರೆಯುತ್ತದೆ. 8). ವಿಷ್ಣುಸಹಸ್ರನಾಮ ಅಂದರೆ ಮಹಾವಿಷ್ಣುವಿನ ಸಹಸ್ರನಾಮ ಪಠನ ಇದರಲ್ಲಿ ಅಲೌಕಿಕ ಶಕ್ತಿ ಇರುವುದನ್ನು ಅನೇಕ ಸಾಧಕರು ಬೋಧಕರು ಕಂಡಿದ್ದಾರೆ, ಅನುಭವಿಸಿದ್ದಾರೆ. ವಿಷ್ಣುಸಹಸ್ರನಾಮ ಪಾರಾಯಣದಿಂದ ಕ್ಯಾನ್ಸರ್ ನಂತಹ ಭಯಂಕರ ರೋಗದಿಂದ ಹಿಡಿದು ಇನ್ನು ಇತರೆ ಅನೇಕ ರೋಗ ರುಜಿನಗಳು ಕೂಡ ವಾಸಿಯಾಗುತ್ತವೆ.
9). ಮನೆಯಲ್ಲಿ ಸಾಮೂಹಿಕ ಪಾರಾಯಣ ಪಠಿಸಿದರೆ ಮನೆಯ ವಾತವರಣವೇ ಬದಲಾಗುತ್ತದೆ. ಮನೆಯವ ದೇಹದಲ್ಲಿ ಮನಸ್ಸಲ್ಲಿ ಆಧ್ಯಾತ್ಮದ ಶಕ್ತಿಸಂಚಾರವಾದಂತಹ ಅನುಭವವಾಗುತ್ತದೆ. ಸಾಮೂಹಿಕ ಪಾರಾಯಣದಲ್ಲಿ ಅಂಥ ಒಂದು ವಿಶೇಷ ಶಕ್ತಿ ಇದೆ.
10). ವಿಷ್ಣು ಸಹಸ್ರನಾಮಕ್ಕೆ ಗಂಡಸು-ಹೆಂಗಸು -ಬ್ರಾಹ್ಮಣ ಕ್ಷತ್ರಿಯ ವೈಶ್ಯ ಶೂದ್ರ ಎನ್ನುವ ಭೇದ ಭಾವವಿಲ್ಲ. ಅದು ಎಲ್ಲಾವರ್ಣಾಶ್ರಮದವರಿಗೆ ಭಗವಂತ ನೀಡಿದ ಪಂಚಮವೇದ(ಮಹಾಭಾರತ) ಇದಾಗಿದೆ. ಹಾಗಾಗಿ ಈ ಸ್ತೋತ್ರವನ್ನು ಎಲ್ಲ ವರ್ಗದವರು ಮತ್ತು ಎಲ್ಲ ವಯಸ್ಸಿನವರು ಪಠಿಸಬಹುದಾಗಿದೆ.
11). ಧಾರ್ಮಿಕ ಶ್ರದ್ಧಾ ಕೇಂದ್ರಗಳಿಗೆ ಭೇಟಿ ನೀಡಿ ನಾವಾಗಿಯೇ ಪರಾಣ ಮಾಡಿ ಬರಬಹುದು. ಸಮಯ ವಿಲ್ಲದವರು ತಮ್ಮ ತಮ್ಮ ಮನೆಯಲ್ಲಿಯೇ ನಿತ್ಯ ಪಠಣ ಮಾಡಿದರೆ ನಮಗೂ ಹಾಗು ನಮ್ಮ ಸುತ್ತ ಮುತ್ತಲಿನ ಪರಿಸರಕ್ಕೂ ವಿಶೇಷ ಶಕ್ತಿ ಪ್ರಾಪ್ತಿಯಾಗುವುದು.
12). ಪ್ರಾಕೃತಿಕ ಸಮತೋಲನಕ್ಕಾಗಿ, ಗ್ರಾಮದ ಶಾಂತಿಗಾಗಿ,ಕುಟುಂಬ ರಕ್ಷಣೆಗಾಗಿ, ನಮ್ಮೆಲ್ಲರ ಉನ್ನತಿಗಾಗಿ ಮನುಷ್ಯನ ಆಯಸ್ಸು ನೂರು ವರ್ಷ… ಈ ನೂರು ವರ್ಷಗಳಲ್ಲಿ 36 ಸಾವಿರ ಹಗಲು ಮತ್ತು 36 ಸಾವಿರ ರಾತ್ರಿಗಳಿವೆ. ಮನುಷ್ಯ ದೇಹ 72 ಸಾವಿರ ನಾಡಿಗಳಿಂದಾಗಿದೆ. ಈ ನಾಡಿಗಳಲ್ಲಿ 36 ಸಾವಿರ ನಾಡಿಗಳು ಎಡ ಭಾಗದಲ್ಲೂ ಮತ್ತು 36 ಸಾವಿರ ನಾಡಿಗಳು ನಮ್ಮಬಲಭಾಗಲ್ಲೂ ಇರುತ್ತವೆ.
ಈ ನಾಡಿಗಳಲ್ಲಿ ರಕ್ತ ಸಂಚಾರ ಸರಿಯಾಗಿ ಆದರೆ ಮನುಷ್ಯನಿಗೆ ಯಾವುದೇ ರೋಗ ಬರಲಾರದು. ವೇದಗಳ ಸಾರವಾದ ಬ್ರಹತೀಸಹಸ್ರದಲ್ಲಿ ಒಂದು ಸಾವಿರ ಮಂತ್ರಗಳಿವೆ, ಹಾಗೂ ಈ ಒಂದು ಸಾವಿರ ಮಂತ್ರದಲ್ಲಿ 72 ,000 ಅಕ್ಷರಗಳಿವೆ. ಈ ಒಂದು ಸಾವಿರ ಮಂತ್ರಗಳ ಸಾರವನ್ನು ಒಂದು ಸಾವಿರ ನಾಮಗಳ ರೂಪದಲ್ಲಿ ವೇದವ್ಯಾಸರು ನಮಗೆ ಕರುಣಿಸಿದ್ದಾರೆ.
ಶ್ರೀ ಮಹಾವಿಷ್ಣು ಸಹಸ್ರ ನಾಮ ವಿಷ್ಣು ಸಹಸ್ರನಾಮವನ್ನು ಪಠಿಸುವುದರಿಂದ ನಾವು ಬ್ರಹತೀಸಹಸ್ರದ 72 ಸಾವಿರ ಅಕ್ಷರಗಳನ್ನು ಜಪಿಸಿದಂತಾಗುತ್ತದೆ. ಇದರಿಂದ ನಮ್ಮ 72 ಸಾವಿರ ನಾಡಿಗಳಲ್ಲಿ ಪೂರ್ಣಪ್ರಮಾಣದ ರಕ್ತ ಸಂಚಾರವಾಗುತ್ತದೆ. ಆದ್ದರಿಂದ ವಿಷ್ಣುಸಹಸ್ರನಾಮ ಭವರೋಗ ಪರಿಹಾರಕ. ಆದರೆ ಅರ್ಥ ತಿಳಿದು ಹೃದಯತುಂಬಿ ಭಕ್ತಿಯಿಂದ ಪಾರಾಯಣ ಮಾಡುವುದು ಮುಖ್ಯ.ವೇದಗಳಿಗೆ ಕನಿಷ್ಠ 3 ಅರ್ಥಗಳಿವೆ, ಮಹಾಭಾರತ ಶ್ಲೋಕಗಳಿಗೆ ಕನಿಷ್ಠ 10 ಅರ್ಥಗಳಿದ್ದರೆ, ಶ್ರೀ ವಿಷ್ಣು ಸಹಸ್ರನಾಮದ ಪ್ರತೀ ನಾಮಕ್ಕೆ ಕನಿಷ್ಠ ನೂರು ಅರ್ಥಗಳಿವೆ.
ಈ ಕಾರಣಕ್ಕಾಗಿಯೇ ನಮ್ಮ ಪ್ರಾಚೀನ ಪೂರ್ವಜರು ಭಗವದ್ಗೀತೆ ಮತ್ತು ಶ್ರೀ ವಿಷ್ಣುಸಹಸ್ರನಾಮವನ್ನು ಅತ್ಯಮೂಲ್ಯ ಗ್ರಂಥವಾಗಿ ಪರಿಗಣಿಸಿದ್ದಾರೆ.
ವೇದಗಳ ಸಾರವಾದ ಬ್ರಹತೀಸಹಸ್ರದಲ್ಲಿ ಒಂದು ಸಾವಿರ ಮಂತ್ರಗಳಿವೆ, ಹಾಗೂ ಈ ಒಂದು ಸಾವಿರ ಮಂತ್ರದಲ್ಲಿ 72,000 ಅಕ್ಷರಗಳಿವೆ. ಈ ಒಂದು ಸಾವಿರ ಮಂತ್ರಗಳ ಸಾರವನ್ನು ಒಂದು ಸಾವಿರ ನಾಮಗಳ ರೂಪದಲ್ಲಿ ವೇದವ್ಯಾಸರು(ಸಾಕ್ಷಾತ್ ಶ್ರೀಹರಿ) ನಮಗೆ ಕರುಣಿಸಿದ್ದಾರೆ.
ಮತ್ತು ಮಹಾಭಾರತದ ಪಿತಾಮಹ ಶ್ರೀ ಭೀಷ್ಮ ದೇವರು ಸಹ ಪಂಚ ಪಾಂಡವರಿಗೆ ಕುರುಕ್ಷೇತ್ರ ರಣಭೂಮಿಯಲ್ಲಿ ಇದೆ ವಿಷ್ಣುಸಹಸ್ತ್ರ ನಾಮವನ್ನು ಬೋಧಿಸಿದ್ದಾರೆ ಆದಕಾರಣ ಅಧಿಕಮಾಸದಲ್ಲಿ ತಾವೆಲ್ಲರೂ ಶ್ರೀ ವಿಷ್ಣು ಸಹಸ್ರನಾಮಪಠಣದ ಫಲವನ್ನು ಪಡೆಯಲೆಂಬ ಆಶಯದೊಂದಿಗೆ ಶ್ರೀ ಭಗವಂತನಲ್ಲಿ ಪ್ರಾರ್ಥನೆ. ಹರಿ ಓಂ. ಈ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಮರೆಯದೇ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ, ಒಳ್ಳೆಯ ವಿಷಯಗಳನ್ನು ಹಂಚಿಕೊಳ್ಳುವುದು ಸಹ ಒಂದು ಒಳ್ಳೆಯ ವಿಷಯ, ಹಾಗೆಯೇ ಮರೆಯದೆ ನಮ್ಮ ಪೇಜ್ ಅನ್ನು ಲೈಕ್ ಮಾಡಿ ಹೆಚ್ಚಿನ ಅಪ್ಡೇಟ್ ಗಳನ್ನು ಪ್ರತಿದಿನ ಪಡೆಯಿ