ಬೇಸಿಗೆ ಕಾಲದಲ್ಲಿ ಕರ್ಬುಜ ತಿನ್ನುವುದರಿಂದ ಮಲಬದ್ಧತೆ ಜೊತೆಗೆ ಈ 5 ರೋಗಗಳಿಗೂ ರಾಮಬಾಣ!

0
1011

ಕರ್ಬುಜ ಹಣ್ಣು ಮಾನವನ ದೇಹಕ್ಕೆ ಉತ್ತಮವಾದ ಹಣ್ಣು ಅದರಲ್ಲೂ ಬೇಸಿಗೆ ಕಾಲದಲ್ಲಿ ಈ ಕರ್ಬುಜ ಹಣ್ಣು ತಿನ್ನುವುದರಿಂದ ಯಾವೆಲ್ಲ ರೋಗಗಳನ್ನು ಹೋಗಲಾಡಿಸುತ್ತೆ ಅನ್ನೋದು ಇಲ್ಲಿದೆ ನೋಡಿ.

ತೂಕ ಇಳಿಸಲು ಸಹಕಾರಿ: ಕರ್ಬೂಜ ಹಣ್ಣು ತೂಕ ಇಳಿಸಲು ಸಹಕಾರಿಯಾಗಿದೆ. ಏಕೆಂದರೆ ಇದರಲ್ಲಿ ಸೋಡಿಯಂ ಅಂಶ ಮಿತವಾಗಿರುತ್ತದೆ. ಇದು ಕೊಬ್ಬು ರಹಿತ, ಕೊಲೆಸ್ಟ್ರಾಲ್ ರಹಿತ ಹಣ್ಣು ಮತ್ತು ಇದರಲ್ಲಿರುವ ಕ್ಯಾಲೋರಿಗಳು ಸಹ ಕಡಿಮೆ. ಹೀಗಾಗಿ ಇದನ್ನು ತಿಂದರೆ ಇದರಲ್ಲಿರುವ ನೀರಿನಂಶವು ನಿಮಗೆ ಹೊಟ್ಟೆ ತುಂಬಿದ ಅನುಭವವನ್ನು ನೀಡುತ್ತದೆ. ಹೀಗೆ ತೂಕ ಇಳಿಸಲು ಸಹಕಾರಿಯಾಗುತ್ತದೆ.

ಹೃದಯದ ಆರೋಗ್ಯಕ್ಕೆ: ಕರ್ಬೂಜ ಹಣ್ಣಿನಲ್ಲಿರುವ ಪೊಟ್ಯಾಶಿಯಂ ಹೃದಯದ ಕ್ಷಮತೆ ಹೆಚ್ಚಿಸಲು ನೆರವಾಗುತ್ತದೆ. ಇದರಲ್ಲಿರುವ ಅಡಿನೋಸಿನ್ ಪೋಷಕಾಂಶಕ್ಕೆ ರಕ್ತವನ್ನು ಹೆಪ್ಪುಗಟ್ಟಿಸುವುದನ್ನು ತಡೆಯುವ ಗುಣವಿದೆ. ಇದು ರಕ್ತನಾಳಗಳಲ್ಲಿ ರಕ್ತ ಸರಾಗವಾಗಿ ಸಂಚರಿಸಲು ನೆರವಾಗುವ. ಈ ಮೂಲಕ ಹೃದಯದ ಮೇಲಿನ ಒತ್ತಡವನ್ನು ಕಡಿಮೆ ಮಾಡಿ ಹಲವು ಹೃದಯ ಸಂಬಂಧಿ ಕಾಯಿಲೆಗಳು ಬಾರದಂತೆ ನೋಡಿಕೊಳ್ಳುತ್ತದೆ.

ಗರ್ಭಿಣಿಯರ ಆರೋಗ್ಯಕ್ಕೆ ಕರ್ಬೂಜ: ಗರ್ಭಾವಸ್ಥೆಯಲ್ಲಿ ಗರ್ಭಿಣಿಯ ದೇಹಕ್ಕೆ ಹೆಚ್ಚಿನ ಪ್ರಮಾಣದ ಫೋಲಿಕ್ ಆಮ್ಲದ ಅಗತ್ಯವಿರುತ್ತದೆ. ಈ ಹಣ್ಣಿನಲ್ಲಿ ಫೋಲಿಕ್ ಆಮ್ಲ ಉತ್ತಮ ಪ್ರಮಾಣದಲ್ಲಿದ್ದು, ಗರ್ಭಿಣಿಯ ದೇಹಕ್ಕೆ ಅಗತ್ಯ ಪೋಷಣೆ ಒದಗಿಸುತ್ತದೆ.

ಮಲಬದ್ಧತೆ ಸಮಸ್ಯೆಗೆ: ಕರ್ಬೂಜ ಹಣ್ಣಿನ ನೀರು ಮತ್ತು ಕರಗುವ ನಾರು ಅತ್ಯಂತ ಸಂತುಲಿತ ಅನುಪಾತದಲ್ಲಿವೆ. ಇದು ಮಲಬದ್ಧತೆಯ ತೊಂದರೆಯನ್ನು ನಿವಾರಿಸಲು ಸಹಕಾರಿಯಾಗಿದೆ. ಅಲ್ಲದೇ ಜೀರ್ಣಕ್ರಿಯೆಯನ್ನು ಸುಲಭಗೊಳಿ ಆರೋಗ್ಯ ವೃದ್ಧಿಸುತ್ತದೆ.

ಕ್ಯಾನ್ಸರ್ ನಿಂದ ರಕ್ಷಣೆ: ಈ ಹಣ್ಣಿನಲ್ಲಿರುವ ವಿಟಮಿನ್ ಸಿ ಹಾಗೂ ಬೀಟಾ ಕ್ಯಾರೋಟೀನ್ ಎಂಬ ಆಂಟಿ ಆಕ್ಸಿಡೆಂಟ್ ದೇಹದಲ್ಲಿ ಕ್ಯಾನ್ಸರ್ ಉಂಟುಮಾಡಬಹುದಾದ ಫ್ರೀ ರ್ಯಾಡಿಕಲ್ ಕಣಗಳನ್ನು ಹಿಮ್ಮೆಟ್ಟುತ್ತದೆ. ದೇಹದ ಜೀವಕೋಶಗಳಿಗೆ ಈ ಕಣಗಳು ಹಾನಿ ಮಾಡುವುದರಿಂದ ರಕ್ಷಿಸುತ್ತದೆ. ಹೀಗೆ ಕರ್ಬೂಜ ಹಣ್ಣು ಕ್ಯಾನ್ಸರ್ ಬರುವುದನ್ನು ತಡೆದು ರಕ್ಷಣೆ ನೀಡುತ್ತದೆ.

LEAVE A REPLY

Please enter your comment!
Please enter your name here