ಪ್ರತಿದಿನ ಬೆಳಗ್ಗೆ ಎದ್ದ ತಕ್ಷಣ ಜೀರಿಗೆ ನೀರು ಕುಡಿಯಲೇ ಬೇಕು ಎನ್ನಲು 5 ಪ್ರಮುಖ ಕಾರಣ

0
2401

ಜೀರ್ಣ ಶಕ್ತಿಯನ್ನು ಹೆಚ್ಚಿಸುವ ಜೀರಿಗೆ ಆ್ಯಸಿಡಿಟಿಯನ್ನೂ ದೂರ ಓಡಿಸುತ್ತದೆ, ಬಾಣಂತಿಯರು ಸೇವಿಸಿದರೆ ಎದೆಹಾಲು ಹೆಚ್ಚಿಸುತ್ತದೆ, ಮಗುವಿಗೆ ಹೊಟ್ಟೆನೋವು ಸಹ ಆಗುವುದಿಲ್ಲ, ಉದರ ಸಂಬಂಧೀ ಸಮಸ್ಯೆಗಳಿಗೆ ಜೀರಿಗೆ ರಾಮಬಾಣವೆಂದೇ ಹೇಳಬಹುದು.

ಜೀರಿಗೆಯನ್ನು ನುಣ್ಣಗೆ ಪುಡಿ ಮಾಡಿ ತೆಂಗಿನ ಕಾಯಿ ಹಾಲಿನಲ್ಲಿ ಬೆರೆಸಿ ಮೈಗೆ ಹಚ್ಚಿಕೊಂಡು ಅರ್ಧಗಂಟೆಯ ನಂತರ ಉಗುರು ಬಿಸಿ ನೀರಿನಿಂದ ಸ್ನಾನ ಮಾಡಿದರೆ ಬೆವರು ಗುಳ್ಳೆ ಬರುವುದರಿಲ್ಲ, ಅಜೀರ್ಣದಿಂದ ಭೇದಿಯಾಗುತ್ತಿದ್ದರೆ ಹುರಿದ ಅಕ್ಕಿ ತರಿಗೆ ಜೀರಿಗೆ ಪುಡಿ ಹಾಗೂ ಸಕ್ಕರೆ ಅಥವಾ ಉಪ್ಪು ಹಾಕಿ ಗಂಜಿ ತಯಾರಿಸಿ ಸೇವಿಸಿದರೆ ಅಜೀರ್ಣ ನಿವಾರಣೆಯಾಗುತ್ತದೆ.

ಜೀರಿಗೆಯನ್ನು ಬಾಯಿಯಲ್ಲಿ ಹಾಕಿಕೊಂಡು ಚೆನ್ನಾಗಿ ಅಗಿದು ತಿನ್ನುವುದರಿಂದ ಹಲ್ಲು ನೋವು ಕಡಿಮೆಯಾಗುತ್ತದೆ, ಜೀರಿಗೆ ಪುಡಿಯನ್ನು ಮಜ್ಜಿಗೆ ಹಾಗೂ ಸ್ವಲ್ಪ ಉಪ್ಪು ಬೆರೆಸಿ ಕುಡಿದರೆ ಜೀರ್ಣಶಕ್ತಿ ಹೆಚ್ಚಿಸುತ್ತದೆ.

ಜೀರಿಗೆ ಕಷಾಯಕ್ಕೆ ಹಾಲು, ಜೇನುತುಪ್ಪು ಸೇರಿಸಿ ಪ್ರತಿದಿನ ಸೇವಿಸಿದರೆ ಎದೆಹಾಲು ಅಧಿಕವಾಗುವುದು, ಮಜ್ಜಿಗೆಗೆ ಜೀರಿಗೆ ಪುಡಿ ಮತ್ತು ಉಪ್ಪು ಹಾಕಿ ಕಲಸಿ ಕುಡಿದರೆ ಪಿತ್ತ ಶಮನವಾಗುತ್ತದೆ, ಎರಡು ಚಮಚ ಹುರಿದ ಜೀರಿಗೆಯನ್ನು ಒಂದು ದೊಡ್ಡ ಲೋಟ ನೀರು ಹಾಕಿ ಕುದಿಸಿ, ಅರ್ಧ ಲೋಟಕ್ಕೆ ಇಳಿಸಿ ಅದಕ್ಕೆ ಉಪ್ಪು ತುಪ್ಪ ಬೆರೆಸಿ ಸೇವಿಸಿದರೆ, ಹೊಟ್ಟೆ ಉಬ್ಬರ, ನೋವು ಗುಣವಾಗುತ್ತದೆ.

ಹೊಟ್ಟೆ ನೋವು, ವಾಂತಿ ಇದ್ದಾಗ ಒಂದು ಚಮಚ ಜೀರಿಗೆ, ಒಂದು ಚಮಚ ಏಲಕ್ಕಿ ಪುಡಿಯನ್ನು ಒಂದು ಲೋಟ ನೀರಿನಲ್ಲಿ ಕುದಿಸಿ ಅರ್ಧ ಲೋಟಕ್ಕೆ ಇಳಿಸಬೇಕು. ತಣ್ಣಗಾದ ನಂತರ ಅದಕ್ಕೆ ಸಕ್ಕರೆ, ನಿಂಬೆ ಪಾನಕ ಬೆರೆಸಿ ದಿನಕ್ಕೆ ಮೂರು ಸಲ ಸೇವಿಸಿದರೆ ಹೊಟ್ಟೆ ತೊಳೆಸುವುದು ಮತ್ತು ವಾಂತಿ ನಿಲ್ಲುತ್ತದೆ.

ನೆನೆಸಿದ ಮೆಂತ್ಯದ ಬೀಜ, ಜೀರಿಗೆ, ಉಪ್ಪು ಹಾಗೂ ಖಾರ ಹಾಕಿ ಚಟ್ನಿ ತಯಾರಿಸಿ ಚಪಾತಿ ಜೊತೆ ಸೇವಿಸಿ. ನಂತರ ಹಾಲನ್ನು ಕುಡಿದರೆ ಒಂದು ವಾರದಲ್ಲಿ ಎದೆ ಹಾಲು ಹೆಚ್ಚಾಗುತ್ತದೆ. ಜೀರಿಗೆ, ಸಕ್ಕರೆ, ಒಣಶುಂಠಿ ಮತ್ತು ಅಡಿಗೆ ಉಪ್ಪು ಇವುಗಳನ್ನು ಒಂದೊಂದು ಟೀ ಚಮಚದಷ್ಟು ತೆಗೆದುಕೊಂಡು ನುಣ್ಣಗೆ ಪುಡಿ ಮಾಡಿ ಒಂದು ಲೋಟ ಬಿಸಿ ನೀರಿಗೆ ಹಾಕಿ ಒಂದು ಹೋಳು ನಿಂಬೆಹಣ್ಣಿನ ರಸವನ್ನು ಅದಕ್ಕೆ ಹಿಂಡಿ ಕುಡಿಯುವುದರಿಂದ ಉದರ ಸಂಬಂಧ ರೋಗಗಳು ಗುಣವಾಗವುದು.

ಜೀರಿಗೆ ಹಾಗೂ ಕೊತ್ತಂಬರಿ ಬೀಜವನ್ನು ಹುರಿದು ಪುಡಿ ಮಾಡಿ ಸಕ್ಕರೆ ಮತ್ತು ನೀರು ಸೇರಿಸಿ ಕುಡಿದರೆ ಬಾಯಾರಿಕೆ ನಿವಾರಣೆಯಾಗುತ್ತದೆ, ಒಂದು ಲೋಟ ನೀರಿಗೆ ಜಜ್ಜಿದ ಶುಂಠಿ ಮತ್ತು ಕುಟ್ಟಿದ ಜೀರಿಗೆ ಹಾಕಿ ಕುದಿಸಿ, ಸೋಸಿ, ನಿಂಬೆರಸ ಮತ್ತು ಜೇನುತುಪ್ಪವನ್ನು ಬೆರೆಸಿ, ಬೇಕಿದ್ದರೆ ಕಾಳು ಮೆಣಸಿನ ಪುಡಿ ಸೇರಿಸಿ ಸೇವಿಸಿ ಇದರಿಂದ ಬೇಸಿಗೆಯ ಸಮಸ್ಯೆಗಳನ್ನು ನಿವಾರಿಸಬಹುದು.

LEAVE A REPLY

Please enter your comment!
Please enter your name here