ನಿಮಗೆ ಗೊತ್ತಿಲ್ಲದ ಮೂಲಂಗಿಯ ಅದ್ಬುತ ಅರೋಗ್ಯ ಲಾಭಗಳು!

0
1175

ಹೌದು ನೀವು ಪ್ರತಿದಿನ ಸೇವಿಸುವಂತ ಊಟದ ಜೊತೆ ಹಸಿಮೂಲಂಗಿಯನ್ನು ಸೇವಿಸುವುದರಿಂದ ಕಣ್ಣು, ಮೂಗು, ಕಿವಿ ಮತ್ತು ಗಂಟಲಿನ ಸಮಸ್ಯೆಗಳು ನಿವಾರಣೆಯಾಗುತ್ತವೆ, ಪ್ರತಿದಿನವೂ ಹಸಿಮೂಲಂಗಿಯನ್ನು ಬಳಸಿ, ಒಳ್ಳೆಯದು. ಹಸಿ ಮೂಲಂಗಿಯ ಚೂರುಗಳಿಗೆ ನಿಂಬೆರಸ, ಕಾಳು ಮೆಣಸಿನಪುಡಿ ಮತ್ತು ಉಪ್ಪು ಬೆರೆಸಿ ತಿನ್ನುವುದರಿಂದ ಕಾಮಾಲೆ ರೋಗ, ಕಣ್ಣಿನ ತೊಂದರೆ, ಅಜೀರ್ಣ ನಿವಾರಣೆಯಾಗುತ್ತದೆ.

ಮೂಲಂಗಿ ಸೇವನೆಯಿಂದ ಅದರಲ್ಲಿರುವ ವಿಟಿಮಿನ್ ಸಿ ನಮ್ಮ ದೇಹದಲ್ಲಿ ರಕ್ತಕಣಗಳನ್ನು ಹೆಚ್ಚಿಸುವುದಲ್ಲದೆ ರೋಗ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಅಷ್ಟೇ ಅಲ್ಲ ಇದು ಕ್ಯಾನ್ಸರ್ ಬರುವುದನ್ನೂ ತಡೆಯಬಲ್ಲದು. ಕೆಂಪು ರಕ್ತಕಣಗಳ ಬೆಳವಣಿಗೆ ಹಾಗೂ ಕಾಮಾಲೆ ರೋಗದ ಚಿಕಿತ್ಸೆಗೆ ಸಹಕಾರಿ. ಮೂಲಂಗಿಯ ಬೇರಿನ ಭಾಗ ಮಾತ್ರವಲ್ಲ, ಅದರ ಸೊಪ್ಪಿನ ಬಳಕೆ ಕೂಡ ಉಪಯುಕ್ತ.

ಮೂಲಂಗಿ ಸೇವಿಸಿದರೆ ಬೇಗ ಹಸಿವಾಗುವುದಿಲ್ಲ ಹಾಗು ದೇಹದ ತೂಕವನ್ನು ನಿಯಂತ್ರಿಸುತ್ತದೆ. ಮೂಲವ್ಯಾಧಿ ಸಮಸ್ಯೆಯಿಂದ ಬಳಲುವವರಿಗೆ ಮೂಲಂಗಿ ಬಳಸಲು ವೈದ್ಯರೇ ಸಲಹೆ ನೀಡುತ್ತಾರೆ.

ಮೂತ್ರಕೋಶ ಮತ್ತು ಮೂತ್ರಪಿಂಡವನ್ನು ಶುಚೀಕರಿಸಲು ಸಹಕಾರಿಯಾದ ಮೂಲಂಗಿ ಸೇವನೆಯಿಂದ ಉರಿಮೂತ್ರ ಮುಂತಾದ ಮೂತ್ರ ಸಂಬಂಧಿ ಕಾಯಿಲೆಗಳಿಂದ ಮುಕ್ತಿ ಹೊಂದಲು ಅನುವಾಗುತ್ತದೆ. ಊಟದಲ್ಲಿ ಹಸಿಮೂಲಂಗಿಯನ್ನು ಸೇವಿಸುವುದರಿಂದ ಕಣ್ಣು,ಮೂಗು,ಕಿವಿ ಮತ್ತು ಗಂಟಲಿನ ಸಮಸ್ಯೆಗಳು ನಿವಾರಣೆಯಾಗುತ್ತವೆ.

ಹಸಿ ಮೂಲಂಗಿಯನ್ನು ತುರಿದು ಉಪ್ಪು ಮತ್ತು ನಿಂಬೆರಸ ಸೇರಿಸಿ ತಿಂದರೆ ನೆಗಡಿ ನಿವಾರಣೆಯಾಗುತ್ತದೆ. ಹಾಗು ಮೂಲಂಗಿ ಬೀಜವನ್ನು ನಿಂಬೆರಸದಲ್ಲಿ ಅರೆದು ಹಚ್ಚುವುದರಿಂದ ಹುಳುಕಡ್ಡಿ, ತುರಿ ರೋಗಗಳು ಗುಣವಾಗುತ್ತದೆ.

ಮೂಲಂಗಿ ಸೊಪ್ಪಿನ ರಸವನ್ನು ಸೇವಿಸುವುದರಿಂದ ಮೂತ್ರವೂ ಕಟ್ಟಿಕೊಂಡಿದ್ದರೆ ಅದರ ಬಿಡುಗಡೆಯಾಗುತ್ತದೆ. ಮೂಲಂಗಿ ಸೊಪ್ಪಿನ ಪಲ್ಯವನ್ನು ತಯಾರಿಸಬಹುದು, ಇದು ಚೆನ್ನಾಗಿರುತ್ತದೆ ಮತ್ತು ಆರೋಗ್ಯಕ್ಕೂ ಒಳ್ಳೆಯದು.

LEAVE A REPLY

Please enter your comment!
Please enter your name here