ಅತೀ ಹೆಚ್ಚು ಪೋಷಕಾಂಶಗಳುಳ್ಳ ಆಹಾರ ಧಾನ್ಯ ಧಾನ್ಯ ಅಂದ್ರೆ ಅದು ರಾಗಿ ಅದರಲ್ಲಿ ಎರಡು ಮಾತಿಲ್ಲ ಬಿಡಿ, ನಗರಗಳ ಫಾಸ್ಟ್ ಫುಡ್ ಅನ್ನೋ ಕೊಬ್ಬಿನಾಂಶಗಳಿರುವ ಪದಾರ್ಥಗಳನ್ನ ಸೇವಿಸಿ ಮನುಷ್ಯ ತನ್ನ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದಿಲ್ಲ, ಇಂತಹ ದೈನಂದಿನ ಜೀವನದಲ್ಲಿ ರಾಗಿಯು ಮಹತ್ವವನ್ನು ತಿಳಿಯುವುದು ಮತ್ತು ಅದನ್ನು ಉಪಯೋಗಿಸಿವುದು ತುಂಬ ಉಪಯುಕ್ತ, ರಾಗಿಯಲ್ಲಿ ಅಧಿಕ ಖನಿಜಾಂಶಗಳು, ಕ್ಯಾಲ್ಸಿಯಂ ಅಂಶಗಳು ಹೇರಳವಾಗಿರುವ ಧಾನ್ಯ.
ರಾಗಿಹಿಟ್ಟಿನಿಂದ ರೊಟ್ಟಿ, ಮುದ್ದೆ, ಉಪ್ಪಿಟ್ಟು, ದೋಸೆ, ಗಂಜಿ, ಹಾಲ್ಬಾಯಿ ಎಂಬ ತಿನಿಸುಗಳನ್ನು ತಯಾರಿಸುತ್ತಾರೆ. ಮಕ್ಕಳ ಪೌಷ್ಟಿಕ ಆಹಾರವೆಂದರೆ ರಾಗಿಹಿಟ್ಟು, ಇದು ಅತ್ಯಂತ ವಿಟಮಿನ್ ಯುಕ್ತ ಆಹಾರ, ಜೀರ್ಣಿಸಿಕೊಳ್ಳಲು ಸುಲಭ ಇದನ್ನು ಸೇವಿಸಿ ಬೆಳೆದ ಮಕ್ಕಳು ಬಹಳ ಆರೋಗ್ಯದಿಂದಲೂ ಗಟ್ಟಿ – ಮುಟ್ಟಾಗಿಯೂ ಇರುತ್ತಾರೆ, ರಾಗಿ ಮಾಲ್ಟನ್ನು ಸರಿಯಾಗಿ ಡಬ್ಬಿಗಳಲ್ಲಿ ಶೇಖರಿಸಿ ಮಾರುವು ಕಂಪೆನಿಗಳು ಚೆನ್ನಾಗಿ ಹಣ ಮಾಡುತ್ತಿವೆ.
ರಾಗಿ ಅತ್ಯಧಿಕ ಕ್ಯಾಲ್ಸಿಯಂ ಮತ್ತು ಕಬ್ಬಿಣದ ಅಂಶಗಳನ್ನೊಳಗೊಂಡಿದೆ. ಇದು ಒಂದು ಉತ್ತಮ ಆಹಾರ ಬೆಳೆಯಾಗಿದ್ದು ಮಕ್ಕಳು ದೊಡ್ದವರೆನ್ನೆದೆ ಉಪಯೋಗಿಸಬಹುದು. ರಾಗಿಮುದ್ದೆ ಅತ್ಯಂತ ಜನಪ್ರಿಯ ಆಹಾರ ಪ್ರಕಾರವಾಗಿದೆ.
100 ಗ್ರಾಮ್ ರಾಗಿಯಲ್ಲಿನ ಪೋಷಕಾಂಶ ಪ್ರತಿಶತ ಪ್ರೋಟಿನ್ : 7.3 ಗ್ರಾಂ ಕೊಬ್ಬು, 1.3 ಗ್ರಾಂ ಪಿಷ್ಟ, 72 ಗ್ರಾಂ ಖನಿಜಾಂಶ, 2.7 ಗ್ರಾಂ ಸುಣ್ಣದಂಶ, 3.44 ಗ್ರಾಂ ನಾರಿನಂಶ, 3.6 ಗ್ರಾಂ ಶಕ್ತಿ.
ರಾಗಿಯಿಂದಾಗುವ ಉಪಯೋಗಗಳು.
ಮೂಳೆಗಳಿಗೆ ಉತ್ತಮ : ರಾಗಿ ಮುದ್ದೆಯ ಇನ್ನೊಂದು ಪರಿಣಾಮಕಾರಿ ಪ್ರಯೋಜನವೆಂದರೆ ನಿಮ್ಮ ಮೂಳೆಗಳನ್ನು ಬಲಪಡಿಸುವ ಶಕ್ತಿಯನ್ನು ಇದು ಹೊಂದಿದೆ, ಇದರಲ್ಲಿ ಹೆಚ್ಚು ಪ್ರಮಾಣದ ಕ್ಯಾಲ್ಶಿಯಂ ಮತ್ತು ವಿಟಮಿನ್ ಡಿ ಇದ್ದು, ಮಕ್ಕಳಿಗೆ ಹಾಗೂ ವೃದ್ಧರಿಗೆ ಆವಶ್ಯಕವಾಗಿರುವ ಕೆಲವೊಂದು ಪ್ರಮುಖ ಅಂಶಗಳನ್ನು ಇದು ಹೊಂದಿದೆ.
ಮಧುಮೇಹಿಗಳಿಗೆ ಸೂಕ್ತ : ಆಧುನಿಕ ಜೀವನದಲ್ಲಿ ಒತ್ತಡದಲ್ಲೆ ಬದುಕಿ ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವ ಮಧುಮೇಹಿಗಳಿಗೆ ರಾಗಿ ಉತ್ಪನ್ನಗಳು ರಾಮಬಾಣವಿದ್ದಂತೆ, ಮಧುಮೇಹದಿಂದ ನೀವು ಬಳಲುತ್ತಿದ್ದೀರಾ? ನಿಮಗೆ ಸೇವಿಸಲು ಇದೊಂದು ಪರಿಪೂರ್ಣ ಆಹಾರವಾಗಿದೆ ಮಧುಮೇಹದ ಮೆಲ್ಲಿಟಸ್ ಮತ್ತು ಜೀರ್ಣಾಂಗವ್ಯೂಹದ ಅಸ್ವಸ್ಥತೆಗಳ ಅಪಾಯ ಮಟ್ಟವನ್ನು ರಾಗಿ ಮುದ್ದೆ ಕಡಿಮೆ ಮಾಡುತ್ತದೆ.
ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ : ರಾಗಿಯಲ್ಲಿರುವ ಅಮೀನೊ ಏಸಿಡ್ ಲೆಸಿತಿನ್ ಹಾಗೂ ಮೆಥೊನಿನ್ ನಿಮ್ಮ ಜೀರ್ಣಾಂಗವ್ಯೂಹದಲ್ಲಿರುವ ಹೆಚ್ಚುವರಿ ಕೊಬ್ಬನ್ನು ಕೆಳಮಟ್ಟಕ್ಕೆ ತರುವ ಮೂಲಕ ನಿಮ್ಮ ಕೊಲೆಸ್ಟ್ರಾಲ್ ಮಟ್ಟವನ್ನು ಸುಧಾರಿಸುತ್ತದೆ.
ದೇಹವನ್ನು ತಂಪುಗೊಳಿಸುತ್ತದೆ : ಬೇಸಿಗೆ ಸಮಯದಲ್ಲಿ ನಿಮ್ಮ ದೇಹವನ್ನು ತಂಪಾಗಿಸುವ ಶಕ್ತಿ ರಾಗಿಗಿದೆ, ಬೇಸಿಗೆ ಸಮಯದಲ್ಲಿ ಕಂಡುಬರುವ ಹಲವಾರು ರೋಗಗಳಿಗೆ ಪರಿಣಾಮಕಾರಿ ಮದ್ದು ಸಹ ರಾಗಿಯಾಗಿದೆ.
ಮಲಬದ್ಧತೆಗೆ ಉಪಯೋಗಕಾರಿ : ರಾಗಿ ಮುದ್ದೆಯಲ್ಲಿರುವ ಫೈಬರ್ ಗುಣ ಮಲಬದ್ಧತೆಗೆ ಸಹಾಯಕಾರಿ, ನೀವು ಸುಲಭವಾದ ಮಲಬದ್ಧತೆಯನ್ನು ಹೊಂದಲು ನಿತ್ಯವೂ ರಾಗಿಮುದ್ದೆ ಸೇವಿಸಿ.
ಥೈರಾಯ್ಡ್ ಸಮಸ್ಯೆಗಳಿಂದ ಬಳಲುತ್ತಿದ್ದರೆ : ಹೌದು ರಾಗಿ ಮುದ್ದೆಯ ಆರೋಗ್ಯಕಾರಿ ಪ್ರಯೋಜನವೆಂದರೆ ನಿಮ್ಮ ಥೈರಾಯ್ಡ್ ಅನ್ನು ಆರೋಗ್ಯಪೂರ್ಣವಾಗಿರಿಸುತ್ತದೆ, ಹೈಪೋಥೈರಾಯ್ಡ್‌ನಿಂದ ಬಳಲುತ್ತಿರುವವರಿಗೆ ಇದು ಉತ್ತಮ.
ಈ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಮರೆಯದೇ ನಿಮ್ಮ ಸ್ನೇಹಿತರೊಂದಿಗೆ ಹಂಚಿ ಕೊಳ್ಳಿ, ಒಳ್ಳೆಯ ವಿಷಯಗಳನ್ನು ಹಂಚಿಕೊಳ್ಳುವುದು ಸಹ ಒಂದು ಒಳ್ಳೆಯ ವಿಷಯ, ಹಾಗೆಯೇ ಮರೆಯದೆ ನಮ್ಮ ಪೇಜ್ ಅನ್ನು ಲೈಕ್ ಮಾಡಿ ಹೆಚ್ಚಿನ ಅಪ್ಡೇಟ್ ಗಳನ್ನು ಪ್ರತಿದಿನ ಪಡೆಯಿರಿ.