ವರ್ಷಕ್ಕೆ ಒಂದು ಬಾರಿ ಮಾತ್ರ ತೆರೆಯುವ ದೇವಾಲಯದ ಪವಾಡ ತಿಳಿಯಿರಿ. ಪುಣ್ಯಪ್ರಾಪ್ತಿಗಾಗಿ ಇದನ್ನು ತಪ್ಪದೇ ಓದಿ.

0
3232

ವರ್ಷಕ್ಕೆ ಒಂದು ಬಾರಿ ಮಾತ್ರ ತೆರೆಯುವ ದೇವಾಲಯವಿದು. ಶ್ರೀ ಹಾಸನಾಂಬ ದೇವಾಲಯದ ಇವತ್ತಿನ ಈ ವರ್ಷದ ದರ್ಶನ. ಹಾಸನ, ಕರ್ನಾಟಕದ ಒಂದು ಜಿಲ್ಲಾ ಕೇಂದ್ರ. ಹಾಸನ ನಗರದಲ್ಲಿದೆ, (ಹೊಸಲೈನ್ ರಸ್ತೆ) ಹಾಸನಾಂಬೆಯ ದೇಗುಲ. ಹಾಸನಾಂಬೆ ನಗರ ದೇವತೆ. ಆದ ಕಾರಣ ಹಾಸನ ಎಂಬ ಹೆಸರು. ಐತಿಹ್ಯ : 12 ನೇ ಶತಮಾನ, ಪಾಳೆಯಗಾರ ಕೃಷ್ಣಪ್ಪನಾಯಕನ ಕಾಲ. ಕೃಷ್ಣಪ್ಪನಾಯಕ ಕಾರ್ಯನಿಮಿತ್ತ ಪ್ರಯಾಣ ಹೊರಟಾಗ ಮೊಲವೊಂದು ಅಡ್ಡ ಬಂದಿತು.

ಇದು ಅಪಶಕುನವೆಂದು ಭಾವಿಸುತ್ತಾನೆ. ಪ್ರತ್ಯಕ್ಷಳಾದ ಆದಿಶಕ್ತಿ ಸ್ವರೂಪಿಣಿ-ಈ ಸ್ಥಳದಲ್ಲಿ ದೇಗುಲ ಕಟ್ಟು, ನಾನು ಹಾಸನಾಂಬೆ ಎಂದೇ ಹೆಸರಾಗಿ ಇಲ್ಲಿ ನೆಲೆಸುವೆ ಎಂದಳಂತೆ. (ಕುದುರು ಗಂಡಿಯಲ್ಲಿ ಇರುವ ಕ್ರಿ.ಶ.114 ವೀರಗಲ್ಲಿನ ಶಾಸನದ ಪ್ರಕಾರ) ದೇಗುಲದ ಕಥೆ : ಕಾಶಿ(ವಾರಣಾಸಿಯಿಂದ ದಕ್ಷಿಣಾಭಿಮುಖವಾಗಿ ವಾಯುವಿಹಾರಕ್ಕೆಂದು ಬಂದ ಸಪ್ತ ಮಾತೃಕೆಯರು ಅಂದರೆ, ಬ್ರಾಹ್ಮೀದೇವಿ, ಮಹೇಶ್ವರಿ, ಕೌಮಾರಿ, ವೈಷ್ಣವಿ, ವಾರಾಹಿ, ಇಂದ್ರಾಣಿ ಮತ್ತು ದುರ್ಗೆ, ಚಾಮುಂಡಿ ಇವರು ಇಲ್ಲಿಗೆ ಬಂದರೆಂದು ಪ್ರತೀತಿ.

ಅವರಲ್ಲಿ, ವೈಷ್ಣವಿ, ವಾರಾಹಿ ಮತ್ತು ಇಂದ್ರಾಣಿ ಈ ಮೂವರು ಹುತ್ತದಲ್ಲಿ ನೆಲೆಸಿದ ಸ್ಥಳವೇ ಹಾಸನಾಂಬೆಯ ದೇಗುಲ. (ದೇವನೊಬ್ಬನೇ ಆದರೂ ಆದಿ ಮಹರ್ಷಿಗಳು ಪುರುಷ ಮತ್ತು ಸ್ತ್ರೀ ಎರಡೂ ಶಕ್ತಿರೂಪಗಳನ್ನು ಒಂದಾಗಿ ಕಂಡಿದ್ದಾರೆ. ಹಾಗೆ ಕಂಡ ಸ್ತ್ರೀ ರೂಪಗಳೆ ಸಪ್ತಮಾತೃಕೆಯರು). ಹಾಸನ ನಗರದ ಹೃದಯಭಾಗದಲ್ಲಿರುವ ದೇವಿಕೆರೆಯಲ್ಲಿ, ಬ್ರಾಹ್ಮಿದೇವಿ, ಕೆಂಚಮ್ಮ ದೇವಿ ಹೊಸಕೋಟೆಯಲ್ಲಿ ನೆಲೆಸಿದ್ದಾರೆ. ಆದಿಶಕ್ತಿ ಸ್ವರೂಪಿಣಿ ಮಾತೃ ಸ್ವರೂಪಿಣಿಯಾಗಿರುವ ಹಾಸನಾಂಬೆ ಸಿಂಹಾಸನಾಪುರಿಯ ಅಧಿದೇವತೆ- ಭವತಾರಿಣಿ, ಅಸುರ ಸಂಹಾರಿಣಿ.

ಬೇಡಿದ ವರಕೊಡುವ ಶಕ್ತಿದೇವತೆಯಾಗಿ ಜನಮಾನಸದಲ್ಲಿ ಕಾಣಿಸಿ ಕೊಂಡಿದ್ದಾಳೆ. ಪ್ರತಿ ವರುಷಕ್ಕೊಮ್ಮೆ ತೆರೆಯುವ ದೇಗುಲದ ಗರ್ಭಗುಡಿ : ಕೃಷ್ಣಪ್ಪ ನಾಯಕನ ಕಾಲದಿಂದಲೂ ಆಶ್ವೀಜ ಮಾಸ ಪೌರ್ಣಮಿಯ ನಂತರ ಬರುವ ಗುರುವಾರದಂದು ಹಾಸನಾಂಬೆಯ ದೇವಾಲಯ ತೆರೆಯಲ್ಪಡುತ್ತದೆ. ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಭಕ್ತಾದಿಗಳು ಅಂದು ದರ್ಶನಾಕಾಂಕ್ಷಿಗಳಾಗಿ ಬಂದು ದೇವಿಯ ದರ್ಶನ ಪಡೆಯುತ್ತಾರೆ. ಗರ್ಭಗುಡಿಯಲ್ಲಿ ಹುತ್ತದೋಪಾದಿಯಲ್ಲಿ ಇರುವ ಆದಿಶಕ್ತಿಸ್ವರೂಪಿಣಿ ಹಾಸನಾಂಬೆಗೆ ಹಿಂದಿನ ವರುಷ ಹಚ್ಚಿಟ್ಟಿದ್ದ ದೀಪವು ಆರದೇ, ಮುಡಿಸಿದ ಹೂ ಬಾಡದೇ ಹಾಗೂ ನೈವೇದ್ಯಕ್ಕಿಟ್ಟ ಅಕ್ಕಿಯು ಅನ್ನವಾಗಿರುವ ವಿಸ್ಮಯ ದೃಶ್ಯವನ್ನು ಕಣ್ತುಂಬಿಕೊಳ್ತುವ ಭಕ್ತಾಗಿಗಳಿಗೆ ಪುನೀತ ಭಾವವೇ.

ಹೀಗೆ ವರ್ಷಕ್ಕೊಮ್ಮೆ ದೇಗುಲದ ಬಾಗಿಲ ಪುರ ಪ್ರಮುಖರಾದ ತಹಸಿಲ್ದಾರರು/ ಕಮೀಷನರ್ ಶಾಸಕರು ಮುಂತಾದವರ ಸಮ್ಮುಖದಲ್ಲಿ ತೆರೆಯಲಾಗುತ್ತದೆ ಅಲ್ಲದೇ, ಬಲಿಪಾಡ್ಯಮಿಯ ಮಾರನೇ ದಿನ ಬಾಗಿಲು ಅವರೆಲ್ಲರ ಸಮ್ಮುಖದಲ್ಲಿ ದೇವಿಗೆ ದೀಪ, ಅಕ್ಕಿ ನೈವಿದ್ಯಾದಿ ಅಲಂಕಾರಗಳು ಇರುವಂತೆಯೇ ಮುಚ್ಚಲಾಗುತ್ತದೆ. ಇಲ್ಲೊಂದು ದಂತ ಕತೆಯೂ ಇದೆ; ಸೊಸೆಯೊಬ್ಬಳು ಮನೆಗೆಲಸ ಬಿಟ್ಟು ದೇವಿಯನ್ನು ಕುರಿತು ಧ್ಯಾನಮಗ್ನಳಾಗಿರುವಾಗ ಆಕೆಯ ಅತ್ತೆ ದೇವಿಯ ಎದುರಿಗೆ ಇದ್ದ ಚಂದನ ಬಟ್ಟಲನ್ನು ತೆಗೆದು ಸೊಸೆಯ ತಲೆಗೆ ಕುಟ್ಟಿದಳಂತೆ.

ಸೊಸೆ ಆರ್ತಳಾಗಿ “ಅಮ್ಮಾ ಹಾಸನಾಂಬೆ. ಕಾಪಾಡು ತಾಯೆ” ಎಂದು ಕೂಗಿ ಕೊಂಡಳು. ದೇವಿಯು ತನ್ನ ಭಕ್ತೆಯ ಮೊರೆ ಕೇಳಿ ತನ್ನ ಸನ್ನಿಧಿಯಲ್ಲಿ ಕಲ್ಲಾಗಿರು. ಇಲ್ಲಿಗೆ ಬರುವವರೆಲ್ಲರ ಭಕ್ತಿಭಾವಕ್ಕೆ ನೀನು ಸಾಕ್ಷಿಯಾಗಿರು ಎಂದು ಹರಸಿದಳಂತೆ. ಹಾಸನಾಂಬೆ ದೇವಿ ಮಡಿವಂತಿಕೆ- ನೈರ್ಮಲ್ಯ, ನೇಮ ನಿಷ್ಠೆಗೆ ಒಲಿವಳೆಂಬದು ಆಚಾರ ವಿಚಾರಗಳಿಂದ ತಿಳಿದು ಬಂದಿದೆ. ವರ್ಷಕ್ಕೊಮ್ಮೆ ಮಾತ್ರ ಭಕ್ತಾದಿಗಳು ಭಯಭಕ್ತಿಯಿಂದ ದೇವಿಯ ದರ್ಶನ ಪಡೆಯಲು ಇಲ್ಲಿಗೆ ಬರುತ್ತಾರೆ.

ಅಂದು ಹಾಸನದ ನಗರ ಹಾಸನಾಂಬೆಯ ಜಾತ್ರೆ ನಡೆಯುತ್ತದೆ. ಆಸ್ತಿಕರಿಗೆ ನೋಡಲು ನಯನ ಮನೋಹರವಾಗಿದೆ. ತಾಯಿ ಹಾಸನಾಂಬೆ ನಮೋನಮಃ ಹಾಸನಾಂಬ ದೇವಿಯ ದರುಶನ ನಿಮಗೆ ಶುಭತರಲಿ. ನಮಃ ಸರ್ವೇ ಜನಾ ಸುಖಿನೋ ಭವಂತು. ಈ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಮರೆಯದೇ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ, ಒಳ್ಳೆಯ ವಿಷಯಗಳನ್ನು ಹಂಚಿಕೊಳ್ಳುವುದು ಸಹ ಒಂದು ಒಳ್ಳೆಯ ವಿಷಯ, ಹಾಗೆಯೇ ಮರೆಯದೆ ನಮ್ಮ ಪೇಜ್ ಅನ್ನು ಲೈಕ್ ಮಾಡಿ ಹೆಚ್ಚಿನ ಅಪ್ಡೇಟ್ ಗಳನ್ನು ಪ್ರತಿದಿನ ಪಡೆಯಿರಿ.

LEAVE A REPLY

Please enter your comment!
Please enter your name here