ಮಾಸ್ಕ್, ಸಾಮಾಜಿಕ ಅಂತರ ಕಾಪಾಡಿಕೊಳ್ಳದಿದ್ದರೆ ಕಠಿಣ ಕ್ರಮ ಅನಿವಾರ್ಯ. ಎಲ್ಲಾ ಬ್ಯಾಂಕ್ ಗಳನ್ನು ಖಾಸಗೀಕರಣ ಮಾಡುವುದಿಲ್ಲ.

0
1350

ಬುಧವಾರ ಎಲ್ಲ ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಸಭೆ. ಮುನ್ನೆಚ್ಚರಿಕೆ ಪಾಲಿಸದಿದ್ದರೆ ಕಠಿಣ ನಿಯಮ ಅನಿವಾರ್ಯ: ಸಚಿವ ಡಾ.ಕೆ.ಸುಧಾಕರ್. ಮಾಸ್ಕ್, ಸಾಮಾಜಿಕ ಅಂತರ ಕಾಪಾಡಿಕೊಳ್ಳದಿದ್ದರೆ ಕಠಿಣ ಕ್ರಮ ಅನಿವಾರ್ಯ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ನಾಗರಿಕರಿಗೆ ಸ್ಪಷ್ಟವಾದ ಸಂದೇಶ ಕೊಟ್ಟಿದ್ದಾರೆ.

ರಾಜ್ಯದಲ್ಲಿ ಕೋವಿಡ್ ಸಂಖ್ಯೆ ಹೆಚ್ಚಾಗುತ್ತಿದೆ. ಇತ್ತ ನೆರೆ ರಾಜ್ಯಗಳಾದ ಮಹಾರಾಷ್ಟ್ರ, ಕೇರಳದಲ್ಲಿ ಕೂಡ ಏರಿಕೆಯಾಗುತ್ತಿದೆ ಅಂತ ಎಚ್ಚರಿಕೆ ನೀಡಿದರು. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಇಲ್ಲದಿದ್ದರೆ ಕಠಿಣ ಕ್ರಮಕ್ಕೆ ಮುಂದಾಗಬೇಕಾಗುತ್ತೆ ಅಂತ ಸಿಎಂ ಹೇಳಿದ್ದಾರೆ ಎಂದು ಸಚಿವರು ತಿಳಿಸಿದರು.

ಇಂದಿನಿಂದ ಜಾಹೀರಾತು ಕೊಟ್ಟು ಜಾಗೃತಿ ಮೂಡಿಸುತ್ತೇವೆ. ಲಸಿಕೆ ವಿತರಣೆಯನ್ನು ಇನ್ನಷ್ಟು ಹೆಚ್ಚಿಸಲಾಗುವುದು. ಇದುವರೆಗೂ 15 ಲಕ್ಷ ಜನರಿಗೆ ನೀಡಿದ್ದೇವೆ. ಪ್ರತಿ ದಿನ ಪ್ರಾಥಮಿಕ ಸರ್ಕಾರಿ ಆಸ್ಪತ್ರೆಗಳಲ್ಲಿ 100 ಜನರಿಗೆ ಟೆಸ್ಟ್ ಮಾಡಲೇ ಬೇಕು. ಜನರಲ್ ಆಸ್ಪತ್ರೆಗಳಲ್ಲಿ 500 ಜನರಿಗೆ ಲಸಿಕೆ ಟಾರ್ಗೆಟ್ ನೀಡಿದ್ದೇವೆ. ಪ್ರತಿ ಸೋಂಕಿತ ವ್ಯಕ್ತಿಗೆ 20 ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರ ಪರೀಕ್ಷೆ ಮಾಡಲೇ ಬೇಕು ಎಂದು ಸಚಿವರು ಹೇಳಿದರು.

ಗಡಿ ರಾಜ್ಯಗಳಲ್ಲಿ ಸೋಂಕು ಏರಿಕೆ ಆಗಿರೋದೇ ಜಿಲ್ಲೆಗಳಲ್ಲಿ ಕೊರೊನಾ ಏರಿಕೆಗೆ ಪ್ರಮುಖ ಕಾರಣವಾಗಿದೆ. ಸಭೆ ಸಮಾರಂಭಗಳಿಗೆ ಕಠಿಣ ನಿಯಮ ಜಾರಿ ಮಾಡಲಾಗುವುದು ಎಂದರು.

ಪ್ರತಿಭಟನೆ, ಸಿನಿಮಾ ಹಾಲ್ ಗಳಿಗೆ ಟಫ್ ರೂಲ್ಸ್ ವಿಚಾರ ಸಂಬಂಧ ಪ್ರತಿಕ್ರಿಯಿಸಿ, ನಾಳೆ ಪ್ರಧಾನಿ ಮೋದಿ ಅವರು ಎಲ್ಲ ರಾಜ್ಯಗಳ ಸಿಎಂಗಳ ಜೊತೆ ವೀಡಿಯೋ ಕಾನ್ಫರೆನ್ಸ್ ನಡೆಸುತ್ತಾರೆ. ಬಹಿರಂಗ ಸಭೆ-ಸಮಾರಂಭಗಳಿಗೆ ಕಠಿಣ ನಿಯಮ ಜಾರಿ ವಿಚಾರ ಕೂಡ ಆ ಬಳಿಕ ನಿರ್ಧಾರ ಆಗುತ್ತದೆ ಎಂದು ಸಚಿವ ಡಾ.ಕೆ ಸುಧಾಕರ್ ವಿವರಿಸಿದರು.

ಎಲ್ಲಾ ಬ್ಯಾಂಕ್ ಗಳನ್ನು ಖಾಸಗೀಕರಣ ಮಾಡುವುದಿಲ್ಲ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್.

ಎಲ್ಲಾ ಬ್ಯಾಂಕ್ ಗಳನ್ನು ಖಾಸಗೀಕರಣ ಮಾಡುವುದಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭರವಸೆ ನೀಡಿದ್ದಾರೆ.
ಉದ್ದೇಶಿತ ಖಾಸಗೀಕರಣ ವಿರೋಧಿಸಿ ಒಂಬತ್ತು ಯೂನಿಯನ್ ಕರೆ ನೀಡಿರುವ ಎರಡು ದಿನಗಳ ಬ್ಯಾಂಕಿಂಗ್ ಮುಷ್ಕರದ ನಡುವೆ ಮಾಧ್ಯಮಗಳೊಂದಿಗೆ ಮಾತನಾಡಿದ ನಿರ್ಮಲಾ ಸೀತಾರಾಮನ್, ಬ್ಯಾಂಕ್ ಗಳ ಮೂಲಕ ದೇಶದ ಆಶೋತ್ತರಗಳನ್ನು ಈಡೇರಿಸಲಾಗುವುದು. ಜೊತೆಗೆ ನೌಕರರ ಹಿತಾಸಕ್ತಿಯನ್ನು ರಕ್ಷಿಸುವುದಾಗಿ ತಿಳಿಸಿದ್ದಾರೆ.

ಸಾರ್ವಜನಿಕ ಉದ್ಯಮ ನೀತಿಯೊಂದನ್ನು ಘೋಷಿಸಲಾಗಿದ್ದು, ನಾಲ್ಕು ಕ್ಷೇತ್ರಗಳನ್ನು ಗುರುತಿಸಿದ್ದೇವೆ. ಸಾರ್ವಜನಿಕ ವಲಯ, ಹಣಕಾಸು ವಲಯ ಕೂಡಾ ಅಲ್ಲಿದೆ. ಎಲ್ಲಾ ಬ್ಯಾಂಕ್ ಗಳನ್ನು ಖಾಸಗೀಕರಣ ಮಾಡುತ್ತಿಲ್ಲ ಎಂದರು. ಖಾಸಗೀಕರಣಗೊಳ್ಳುವ ನಿರೀಕ್ಷೆಯಲ್ಲಿರುವ ಬ್ಯಾಂಕ್ ನೌಕರರ ಸಂಬಳ, ಪಿಂಚಣಿ ಸೇರಿದಂತೆ ಎಲ್ಲಾ ರೀತಿಯ ಸೌಕರ್ಯಗಳನ್ನು ಒದಗಿಸುವ ಮೂಲಕ ಅವರ ಹಿತಾಸಕ್ತಿಯನ್ನು ಕಾಪಾಡುವುದಾಗಿ ನಿರ್ಮಲಾ ಸೀತಾರಾಮನ್ ಭರವಸೆ ನೀಡಿದರು.

LEAVE A REPLY

Please enter your comment!
Please enter your name here