9, 10ನೇ ತರಗತಿ: ಅರ್ಧ ದಿನ ಶಾಲೆ ಶುರು. ಹಾಜರಾಗಲು ಅನುಮತಿ ಪತ್ರ ಕಡ್ಡಾಯ. ವೇಳಾಪಟ್ಟಿ, ವಿವರ ಇಲ್ಲಿದೆ.

0
2350

9, 10ನೇ ತರಗತಿ: ಅರ್ಧ ದಿನ ಶಾಲೆ ಶುರು! ಹಾಜರಾಗಲು ಅನುಮತಿ ಪತ್ರ ಕಡ್ಡಾಯ; ವೇಳಾಪಟ್ಟಿ, ವಿವರ ಇಲ್ಲಿದೆ. ಆಗಸ್ಟ್ 23 ರಿಂದ 9 ಮತ್ತು 10ನೇ ತರಗತಿಗಳನ್ನು ಭೌತಿಕವಾಗಿ ನಡೆಸಲು ರಾಜ್ಯ ಸರ್ಕಾರದ ಅಧಿಕೃತ ಆದೇಶ ಹೊರಬಿದ್ದಿದೆ. ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರೌಢಶಾಲೆಗಳಲ್ಲಿ ಪ್ರತಿ ದಿನ ಬೆಳಗಿನ ಹೊತ್ತಿನಲ್ಲಿ ಅರ್ಧ ದಿನ ಭೌತಿಕ ತರಗತಿಗಳನ್ನು ನಡೆಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶಿಸಿದೆ.

ಆದಾಗ್ಯೂ ಭೌತಿಕವಾಗಿ ತರಗತಿಗಳಿಗೆ ಹಾಜರಾಗುವುದು ಕಡ್ಡಾಯವಲ್ಲ. ಆನ್​ಲೈನ್ ಅಥವಾ ಪರ್ಯಾಯ ವಿಧಾನದಲ್ಲೂ ವಿದ್ಯಾರ್ಥಿಗಳು ಹಾಜರಾಗಬಹುದು. ಶಾಲೆಗೆ ಹಾಜರಾಗಲು ಬಯಸದ ವಿದ್ಯಾರ್ಥಿಗಳಿಗೆ ಶಾಲೆಗಳು ಈಗ ಅನುಸರಿಸುತ್ತಿರುವ ಪರ್ಯಾಯ ಕಲಿಕೆ ವಿಧಾನಗಳನ್ನು ಮುಂದುವರಿಸಿಕೊಂಡು ಹೋಗಬೇಕು ಎಂದು ಆದೇಶದಲ್ಲಿ ಹೇಳಲಾಗಿದೆ.

ಮಕ್ಕಳು ಭೌತಿಕವಾಗಿ ಶಾಲೆಗೆ ಹಾಜರಾಗುವಾಗ ಪೋಷಕರ ಅನುಮತಿ ಪತ್ರ ತರುವುದು ಕಡ್ಡಾಯವಾಗಿದೆ. ಈ ಪತ್ರದಲ್ಲಿ ಮಗುವಿಗೆ ಕರೊನಾ ಸೋಂಕಿನ ಯಾವುದೇ ಲಕ್ಷಣಗಳಿಲ್ಲ ಎಂದು ದೃಢೀಕರಿಸಿರಬೇಕು. ಮಕ್ಕಳು ಅಗತ್ಯಕ್ಕೆ ತಕ್ಕಂತೆ ಉಪಾಹಾರ ಮತ್ತು ನೀರನ್ನು ಮನೆಯಿಂದಲೇ ತರಬೇಕು. ಶಾಲೆಗಳಲ್ಲಿ ಮಕ್ಕಳಿಗೆ ಕುಡಿಯಲು ಶುದ್ಧೀಕರಿಸಿದ ಬಿಸಿನೀರಿನ ವ್ಯವಸ್ಥೆ ಮಾಡಬೇಕು ಎಂದಿದೆ.

ವೇಳಾಪಟ್ಟಿ: ಶಾಲೆಗಳ ಕೊಠಡಿ, ಶಿಕ್ಷಕರ ಸಂಖ್ಯೆ ಮತ್ತು ವಿದ್ಯಾರ್ಥಿಗಳ ಸಂಖ್ಯೆಯನ್ನು ಆಧರಿಸಿ, ಮಕ್ಕಳ ನಡುವೆ ಭೌತಿಕ ಅಂತರ ಕಾಪಾಡಿಕೊಳ್ಳುವ ಉದ್ದೇಶದಿಂದ 15 ರಿಂದ 20 ಮಕ್ಕಳ ತಂಡಗಳನ್ನು ಮಾಡಿ ತರಗತಿಗಳನ್ನು ನಡೆಸಬೇಕು. ಸೋಮವಾರದಿಂದ ಶುಕ್ರವಾರ ಬೆಳಿಗ್ಗೆ 10 ರಿಂದ 1.30 ರವರೆಗೆ ತರಗತಿಗಳನ್ನು ನಡೆಸಬೇಕು. ಶನಿವಾರದಂದು 10 ರಿಂದ 12.50 ರವರೆಗೆ ನಡೆಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈ ನಿಟ್ಟಿನಲ್ಲಿ ಶಾಲೆಗಳಲ್ಲಿ ಅನುಸರಿಸಬೇಕಾದ ಪ್ರಮಾಣಿತ ಕಾರ್ಯಾಚರಣೆ ವಿಧಾನ(ಎಸ್​ಒಪಿ)ಯನ್ನು ಕೂಡ ಸರ್ಕಾರ ವಿವರವಾಗಿ ಹೊರಡಿಸಿದೆ. 9ನೇ ಮತ್ತು 10ನೇ ತರಗತಿಗಳನ್ನು ನಡೆಸಲು ಮಾದರಿ ವೇಳಾಪಟ್ಟಿಯನ್ನು ಸಹ ನೀಡಿರುವ ಶಿಕ್ಷಣ ಇಲಾಖೆ, ಮಧ್ಯಾಹ್ನದ ನಂತರ ಶಿಕ್ಷಕರು 8ನೇ ತರಗತಿಯ ವಿದ್ಯಾರ್ಥಿಗಳಿಗೆ ಆನ್​ಲೈನ್​ ಅಥವಾ ಪರ್ಯಾಯ ವಿಧಾನದ ತರಗತಿಗಳನ್ನು ನಡೆಸಬೇಕು ಎಂದು ಹೇಳಿದೆ.

ಈ ವಿಷಯದ ಬಗ್ಗೆ ನಿಮ್ಮ ಅನಿಸಿಕೆ ಏನು ಕಮೆಂಟ್ ಮಾಡಿ. ಈ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಮರೆಯದೇ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ, ವಿಷಯಗಳನ್ನು ಹಂಚಿಕೊಳ್ಳುವುದು ಸಹ ಒಂದು ಒಳ್ಳೆಯ ವಿಷಯ, ಹಾಗೆಯೇ ಮರೆಯದೆ ನಮ್ಮ ಪೇಜ್ ಅನ್ನು ಲೈಕ್ ಮಾಡಿ ಹೆಚ್ಚಿನ ಅಪ್ಡೇಟ್ ಗಳನ್ನು ಪ್ರತಿದಿನ ಪಡೆಯಿರಿ.

LEAVE A REPLY

Please enter your comment!
Please enter your name here