ಸೆ.5 ರಂದು ಶಿಕ್ಷಕರ ದಿನಾಚರಣೆ: ರಾಜ್ಯ ಸರಕಾರದಿಂದ ಮಾರ್ಗಸೂಚಿ ಬಿಡುಗಡೆ.

0
2070

ಸೆ.5 ರಂದು ಶಿಕ್ಷಕರ ದಿನಾಚರಣೆ: ರಾಜ್ಯ ಸರಕಾರದಿಂದ ಮಾರ್ಗಸೂಚಿ ಬಿಡುಗಡೆ. ಕೊರೋನಾ ಸೋಂಕಿನ ನಡುವೆ ಸೆಪ್ಟೆಂಬರ್ 5, 2021ರ ಶಿಕ್ಷಕರ ದಿನಾಚರಣೆಗಾಗಿ ರಾಜ್ಯ ಸರ್ಕಾರವೂನಿಯಂತ್ರಣ ಕ್ರಮಗಳ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಈ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಶಿಕ್ಷಕರಿಗೆ ಸೂಚಿಸಿದೆ.

ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ರಾಜ್ಯದಲ್ಲಿ ಕೋವಿಡ್-19 ಸೋಂಕು ವ್ಯಾಪಕವಾಗಿ ಹರಡುವ ಸಂಭವ ಇರುವ ಹಿನ್ನಲೆಯಲ್ಲಿ ಸಾರ್ವಜನಿಕ ಆರೋಗ್ಯ ಮತ್ತು ಸುರಕ್ಷಾ ದೃಷ್ಠಿಯಿಂದ ಸರ್ಕಾರವು ಈ ಸಾಲಿನ ಶಿಕ್ಷಕರ ದಿನಾಚರಣೆಯನ್ನು ಸರಳವಾಗಿ ಮತ್ತು ಸುರಕ್ಷಿತವಾಗಿ ಆಚರಿಸಲು ತೀರ್ಮಾನಿಸಿರುವ ಹಿನ್ನಲೆಯಲ್ಲಿ, ಪ್ರಸಕ್ತ ಸಾಲಿನ ಜಿಲ್ಲಾ, ತಾಲೂಕು ಮತ್ತು ಶಾಲಾ ಮಟ್ಟದ ಶಿಕ್ಷಕರ ದಿನಾಚರಣೆಯನ್ನು ಸೆ. ೫ ರಂದು ಭಾನುವಾರದಂದು ಕೆಳಕಂಡಂತೆ ಮಾರ್ಗಸೂಚಿಗಳನ್ನು ಅನುಸರಿಸಿ, ಆಯೋಜಿಸಲು ತಿಳಿಸಿದ್ದಾರೆ.

ಮಾರ್ಗಸೂಚಿ:- ಜಿಲ್ಲಾ ಮಟ್ಟದ ವೇದಿಕೆಯ ಮೇಲೆ ಜಿಲ್ಲಾ ಉಸ್ತುವಾರಿ ಸಚಿವರು, ಸಂಸತ್ ಸದಸ್ಯರು, ವಿಧಾನಸಭಾ, ಪರಿಷತ್ ಸದಸ್ಯರು, ಜಿಲ್ಲಾ ಪಂಚಾಯ್ತಿ ಅಧ್ಯಕ್ಷರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯ್ತಿ ಸಿಇಓ, ಜಿಲ್ಲಾ ಉಪನಿರ್ದೇಶಕರು ಇವರು ಮಾತ್ರ ಆಸೀನರಾಗಿರುವಂತೆ ವೇದಿಕೆ ಸಜ್ಜುಗೊಳಿಸುವುದು.

ತಾಲೂಕು ಮಟ್ಟದ ವೇದಿಕೆ ಮೇಲೆ ಸ್ಥಳೀಯ ವಿಧಾನಸಭಾ, ಪರಿಷತ್ತಿನ ಸದಸ್ಯರು, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷರು, ಸಿಇಓ, ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು. ಶಾಲಾ ಮಟ್ಟದ ವೇದಿಕೆಯಲ್ಲಿ ಶಾಲಾ ಮುಖ್ಯಸ್ಥರು, ಎಸ್ ಡಿ ಎಂ ಸಿ ಅಧ್ಯಕ್ಷರು, ಸದಸ್ಯರು ಮತ್ತು ಎಲ್ಲಾ ಶಿಕ್ಷಕರು ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಭಾವಚಿತ್ರಕ್ಕೆ ಪುಷ್ಪನಮನವನ್ನು ಸಲ್ಲಿಸೋ ಮೂಲಕ ಗೌರವ ಸೂಚಿಸುವುದು.

ವೇದಿಕೆಯ ಮುಂಭಾಗದ 10 ಮಂದಿ ಮೀರದಂತೆ ಆಸೀನರಾಗಿರುವಂತೆ ವ್ಯವಸ್ಥೆ. 2 ನೇ ಸಾಲಿನಲ್ಲಿ ಎಲ್ಲಾ ಸಂಘಗಳೂ ಸೇರಿದಂತೆ ಗರಿಷ್ಠ 10 ಮಂದಿಗೆ ಮಾತ್ರ ವ್ಯವಸ್ಥೆ. ಮೂರನೇ ಸಾಲಿನಲ್ಲಿ ಇಲಾಖೆಯ ಮಟ್ಟದ 10ಮಂದಿ ಮೀರದಂತೆ ಅಧಿಕಾರಿಗಳು ವೇದಿಕೆಯ ಬಲಭಾಗದಲ್ಲಿ ಮಾಧ್ಯಮದ ಪ್ರತಿನಿಧಿಗಳು ವೇದಿಕೆಯ ಎಡಭಾಗದಲ್ಲಿ ಪ್ರಶಸ್ತಿ ಪುರಸ್ಕೃತ ಶಿಕ್ಷಕರು.

ಆಹ್ವಾನ ಪತ್ರಿಕೆಯನ್ನು 50 ಮಂದಿಗೆ ಮೀರದಂತೆ ಮುದ್ರಿಸುವುದು. ಅಸನ ವ್ಯವಸ್ಥೆಯಲ್ಲಿ ಸಾಮಾಜಿಕ ಅಂತರ ಕಡ್ಡಾಯ ರಾಜ್ಯ, ಜಿಲ್ಲಾ, ತಾಲೂಕು ಮತ್ತು ಶಾಲಾ ಮಟ್ಟದಲ್ಲಿ ಸೆ. 05 ರಂದು ಶಿಕ್ಷಕರ ದಿನಾಚರಣೆ ಸಮಾರಂಭದ ಎಲ್ಲಾ ಹಂತಗಳಲ್ಲಿಯೂ ಸುರಕ್ಷತೆಯನ್ನು, ಸಾಮಾಜಿಕ ಅಂತರವನ್ನು ಕಡ್ಡಾಯ.

ಹೂಗುಚ್ಛ, ಹಾರ-ತುರಾಯಿ, ಹಣ್ಣಿನ ಬುಟ್ಟಿ, ನೆನಪಿನ ಕಾಣಿಕೆ ಇತ್ಯಾದಿ ಯಾವುದೇ ರೀತಿಯ ಕಾಣಿಕೆಗಳನ್ನು ನೀಡಬಾರದು. ಬದಲಾಗಿ ಕನ್ನಡ ಪುಸ್ತಕಗಳನ್ನು ನೀಡಬೇಕು. ಕಾರ್ಯಕ್ರಮದಲ್ಲಿ ಭಾಗವಹಿಸುವ ಎಲ್ಲರೂ ಪ್ರವೇಶದ್ವಾರದಲ್ಲಿಯೇ ಥರ್ಮಲ್ ಸ್ಕ್ರೀನಿಂಗ್ ಗೆ ಒಳಗಾಗುವುದು. ಕೈಗಳಿಗೆ ಸ್ಯಾನಿಟೈಸರ್ ಮಾಡಿಸಿಕೊಳ್ಳುವುದು.ಮಾಸ್ಕ್ ಕಡ್ಡಾಯ.

ಸುರಕ್ಷಿತ ವಿಧಾನದಲ್ಲಿ ಶುದ್ಧ ಕುಡಿಯುವ ನೀರನ್ನು ಒದಗಿಸುವುದನ್ನು ಹೊರತುಪಡಿಸಿ, ಊಟ, ಲಘು ಉಪಹಾರ ಇತ್ಯಾದಿಗಳ ವ್ಯವಸ್ಥೆಯನ್ನು ಮಾಡತಕ್ಕದ್ದಲ್ಲ. ಈ ಮೇಲ್ಕಂಡ ಮಾರ್ಗಸೂಚಿಗಳನ್ನು ಅನುಸರಿಸಿ, ಶಿಕ್ಷಕರ ದಿನಾಚರಣೆಯನ್ನು ಆಚರಿಸುವುದು. ಇದರ ಹೊರತುಪಡಿಸಿ ಉಳಿದ ಯಾವುದೇ ಚಟುವಟಿಕೆಗಳನ್ನು ಆಯೋಜಿಸುವಂತಿಲ್ಲ. ಯಾವ ಹಂತಗಳಲ್ಲಿಯೂ ಸಹ ಮಕ್ಕಳು, ವಿದ್ಯಾರ್ಥಿಗಳು ಭಾಗವಹಿಸುವಂತಿಲ್ಲ ಎಂಬುದಾಗಿ ತಿಳಿಸಿದೆ.

LEAVE A REPLY

Please enter your comment!
Please enter your name here